ಚಿತ್ರದುರ್ಗ ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರು ಕಾಯುತ್ತಿರುವ 7 ನೇ ವೇತನ ಆಯೋಗದ ವರದಿ ಸಲ್ಲಿಕೆಯಾದ ನಂತರ ಜಾರಿ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆ ಆಗಿದೆ. ಇದರಿಂದ ರಾಜ್ಯದ 195 ತಾಲೂಕುಗಳನ್ನು ಬರಪೀಡತ ಪ್ರದೇಶ ಎಂದು ಘೋಷಿಸಲಾಗಿದೆ. ಕೃಷಿ ಸಚಿವರು ಸಭೆ ನಡೆಸಿದ್ದು ಬರ ಪೀಡಿತ ತಾಲೂಕುಗಳ ಸಂಖ್ಯೆ ಹೆಚ್ಚಾಗಬಹುದು.
ರಾಜ್ಯದಲ್ಲಿ ಒಟ್ಟು 42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ರೂ. 30 ಸಾವಿರ ಕೋಟಿಯಷ್ಟು ನಷ್ಟ ಉಂಟಾಗಿದೆ. ಕೇಂದ್ರ ವಿಪತ್ತು ನಿರ್ವಹಣಾ ನಿಧಿ (ಎನ್.ಡಿ.ಆರ್.ಎಫ್) ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ರೂ.4860 ಕೋಟಿ ಪರಿಹಾರ ಕೇಳಿದ್ದೇವೆ. ಸದ್ಯ ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿದ್ದು. 11 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಬಗ್ಗೆ ಅಧ್ಯಯನ ನೆಡೆಸಿ, ಅವಲೋಕಿಸಿ ವರದಿ ನೀಡಲಿದೆ.