ಬಿಪಿಎಲ್ ಕಾರ್ಡುದಾರರು ಪ್ರತಿ ತಿಂಗಳು ಅಕ್ಕಿಯನ್ನು ಪಡೆಯುತ್ತಿದ್ದಾರೆ. ಆದರೆ ಅವರಿಗೆ ಇತರ ಪಡಿತರ ಸಾಮಗ್ರಿಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಖರೀದಿಸುವ ಮುದ್ರಿತ ರಶೀದು ದೊರೆತಿಲ್ಲ.
ಈಗಿನಿಂದ ಪಡಿತರ ಅಂಗಡಿಗಳಲ್ಲಿ ಪಡಿತರ ಸಾಮಗ್ರಿಗಳನ್ನು ಖರೀದಿಸಿ ಮುದ್ರಿತ ರಶೀದನ್ನು ಪಡೆಯಬೇಕಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅಡಿಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಸರಕಾರ ಉಚಿತವಾಗಿ ಅಕ್ಕಿ ಒದಗಿಸುತ್ತದೆ.
ಆದರೆ ರಾಜ್ಯ ಸರಕಾರ ಇದನ್ನು ತನ್ನದು ಎಂದು ಬಿರುದಾರಿಸುತ್ತದೆ. ಹೀಗಾಗಿ ರಶೀದಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಹಾಗೂ ಕೇಂದ್ರ ಸರಕಾರದ ಯೋಜನೆಯನ್ನು ರಶೀದಿಯಲ್ಲಿ ಮುದ್ರಿಸಿ ಬಿಪಿಎಲ್ ಕಾರ್ಡುದಾರರಿಗೆ ನೀಡುವಂತೆ ಕೇಂದ್ರ ಸರಕಾರ ಮಹತ್ವದ ಆದೇಶ ಹೊರಡಿಸಿದೆ.
ಮುಂಬರು 2024 ರ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರಕಾರ ಈ ಆದೇಶವನ್ನು ಜಾರಿಗೆ ತಂದಿದೆ. ನ್ಯಾಯಬೆಲೆ ಅಂಗಡಿಗಳು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಅಡಿಯಲ್ಲಿ ಅಕ್ಕಿ ಒದಗಿಸುವ ಕೇಂದ್ರವಾಗಿದೆ. ಈ ಯೋಜನೆಯನ್ನೂ ಜನರಿಗೆ ತಲುಪಿಸುವುದು ಯೋಜನೆಯ ಉದ್ದೇಶ ಎಂದು ಸರಕಾರ ಹೇಳಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಕೊರೊನಾ ಸಂದರ್ಭದಲ್ಲಿ ಬಡವರಿಗೆ ಆಹಾರ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆಯನ್ನು ಸದ್ಯ 2024ರ ಜೂನ್ ವರೆಗೆ ವಿಸ್ತರಣೆಯನ್ನು ಮಾಡಿದ್ದು, ಈ ಮೂಲಕ ಬಡವರಿಗೆ ಅಕ್ಕಿಯನ್ನು ವಿತರಣೆ ಮಾಡುತ್ತಿದೆ.”